HEALTH TIPS

ಮಂಗಳೂರು: ಕೇರಳ ಗಡಿಯಲ್ಲಿ ತಪಾಸಣೆ ಮತ್ತಷ್ಟು ಕಟ್ಟುನಿಟ್ಟು - ಡಿಸಿಪಿ ಹರಿರಾಮ್ ಶಂಕರ್

       ಮಂಗಳೂರು: ಕೇರಳದಲ್ಲಿ ಕೊರೊನಾ ರೂಪಾಂತರಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಪ್ರವೇಶಿಸುವ ಗಡಿಯಲ್ಲಿ ಕಠಿಣ ಷರತ್ತು ವಿಧಿಸಲಾಗಿದೆ ಎಂದು ದ.ಕ.  ಡಿಸಿಪಿ ಹರಿರಾಮ್ ಶಂಕರ್ ಹೇಳಿದ್ದಾರೆ.
      ಇಂದು( ಮಂಗಳವಾರ) ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹರಿರಾಮ್ ಶಂಕರ್, ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ಮಾಡಲಿದ್ದು ಈ ವೇಳೆ ಎಸೆಸೆಲ್ಸಿ ಪರೀಕ್ಷೆಗೆ ಆಗಮಿಸಲಿರುವ ವಿದ್ಯಾರ್ಥಿಗಳೊಂದಿಗೆ ಬರುವ ಪೋಷಕರಿಗೆ ಯಾವುದೇ ರೀತಿಯಲ್ಲಿ ಅನಾನುಕೂಲತೆ ಉಂಟಾಗದಂತೆ ನಾವು ಎಚ್ಚರಿಕೆ ವಹಿಸುತ್ತೇವೆ. ಜು.19, ಜು.22 ಪ್ರಾರಂಭವಾಗಲಿರುವ ಎಸೆಸೆಲ್ಸಿ ಪರೀಕ್ಷೆಯ ಹಿನ್ನಲೆಯಲ್ಲಿ ಮಕ್ಕಳೊಂದಿಗೆ ಬರುವ ಪೋಷಕರಿಗೆ ನಾವು ಚೆಕ್‌ಪೋಸ್ಟ್‌ಗಳಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳುತ್ತೇವೆ . ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೊವೀಡ್ ರೂಪಾಂತರ ಪ್ರಕರಣಗಳು ವರದಿಯಾಗಿದ್ದರಿಂದ ಕರ್ನಾಟಕಕ್ಕೆ ಪ್ರವೇಶಿಸುವ ಗಡಿಯಲ್ಲಿ ಕಠಿಣ ಷರತ್ತು ವಿಧಿಸಲಾಗಿದೆ. ಹೀಗಾಗಿ ಚೆಕ್‌ಪೋಸ್ಟ್‌ಗಳಲ್ಲಿ ಪೋಷಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಿ ತಕ್ಷಣ ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ" ಎಂದು ವಿವರಿಸಿದ್ದಾರೆ.
      ತಪಾಸಣೆ ಮತ್ತಷ್ಟು ಬಿಗಿ:ಈಗಾಗಲೇ ಕರ್ನಾಟಕಕ್ಕೆ ಪ್ರವೇಶಿಸುವ ಗಡಿಯಲ್ಲಿ ಕಠಿಣ ಷರತ್ತು ವಿಧಿಸಲಾಗಿದೆ. ತಲಪಾಡಿ ಚೆಕ್ ಪೋಸ್ಟ್‌  ಹೊರತುಪಡಿಸಿ, ಹೆಚ್ಚುವರಿ 5 ಚೆಕ್ ಪೋಸ್ಟ್‌ಗಳನ್ನು ಕೇರಳ - ಮಂಗಳೂರು ಗಡಿಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವುದು. ತೌಡುಗೋಳಿ, 
 ನೆತ್ತಿಲಪದವು, ನಾರ್ಯ ಕ್ರಾಸ್, ನಂದಾರ ಪಡ್ಪು ಮತ್ತು ಮುದುಂಗಾರು ಕಟ್ಟೆ ಈ ಪ್ರದೇಶದಲ್ಲಿ ಐದು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಚೆಕ್ ಪೋಸ್ಟ್‌ಗಳಲ್ಲಿ ವೈದ್ಯಕೀಯ ತಂಡದೊಂದಿಗೆ ಮೂರು ಪಾಳಿಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು. ಈ ಸ್ಥಳಗಳನ್ನು ಹೊರತುಪಡಿಸಿ ರೈಲ್ವೆ ಇಲಾಖೆಯ ಸಹಯೋಗದೊಂದಿಗೆ, ಮಂಗಳೂರು ಕೇಂದ್ರ ಮತ್ತು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಚೆಕಿಂಗ್ ಪಾಯಿಂಟ್ ಸ್ಥಾಪಿಸಲಾಗುವುದು. ನೆರೆಯ ರಾಜ್ಯಗಳಲ್ಲಿ ಕೊವೀಡ್ ರೂಪಾಂತರಗಳು ಪತ್ತೆಯಾಗಿರುವುದರಿಂದ ಮುಂದಿನ 15 ದಿನಗಳವರೆಗೆ ನಾವು ಕಟ್ಟುನಿಟ್ಟಾಗಿ ತಪಾಸಣೆ ಮಾಡುತ್ತೇವೆ.ಲಭ್ಯ ಸಾಮರ್ಥ್ಯಕ್ಕೆ ಅನುಗುಣವಾಗಿ ಗರಿಷ್ಟ ಕೊವೀಡ್ ರ್‍ಯಾಂಡಮ್ ತಪಾಸಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
       ಕೇರಳದಿಂದ ಪ್ರತಿದಿನ ಮಂಗಳೂರಿಗೆ ಪ್ರಯಾಣಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಇತರರು 14 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು, ಇದನ್ನೇ ಪಾಸ್‌ಗಳೆಂದು ಪರಿಗಣಿಸಲಾಗುವುದು. ಇದನ್ನು ಹೊರತುಪಡಿಸಿ ಜಿಲ್ಲೆ ಪ್ರವೇಶಿಸುವ ಇತರರು 72 ಗಂಟೆಗಳೊಳಗೆ ಮಾಡಿರುವ ಕೊವೀಡ್ ನೆಗೆಟಿವ್ ವರದಿ ಹೊಂದಿರಬೇಕು. ಒಂದು ವೇಳೆ ಚೆಕ್‌ಪೋಸ್ಟ್‌ಗಳಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಯ ಸಂದರ್ಭದಲ್ಲಿ ಪಾಸಿಟಿವ್ ಬಂದ್ರೆ ಸಂಬಂಧಪಟ್ಟವರು ಈ ಬಗ್ಗೆ ಕೇರಳ ಸರ್ಕಾರಕ್ಕೆ ಮಾಹಿತಿ ನೀಡುವರು ಎಂದು ಹೇಳಿದರು.
       ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಪಿ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries