ತಿರುವನಂತಪುರ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಸಿಪಿಎಂ ರಾಜ್ಯ ಸಮಿತಿ ಸದಸ್ಯೆ ಸುಸಾನ್ ಕೋಡಿ ಅವರನ್ನು ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ. ಪಕ್ಷದ ರಾಜ್ಯ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ. ಆದರೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.
ಸುಸಾನ್ ಪ್ರಸ್ತುತ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಅವರು ಡೆಮಾಕ್ರಟಿಕ್ ಮಹಿಳಾ ಸಂಘದ ರಾಜ್ಯ ಅಧ್ಯಕ್ಷರಾಗಿರುವರು. ವಿವಾದದ ಹಿನ್ನೆಲೆಯಲ್ಲಿ ಎಂಸಿ ಜೋಸೆಫೀನ್ ರಾಜೀನಾಮೆ ನೀಡಿದ ಬಳಿಕ ಹೊಸ ನೇಮಕಾತಿ ಕುರಿತು ಮಾತುಕತೆ ನಡೆಯುತ್ತಿದೆ.