ನವದೆಹಲಿ: ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಸರ್ಕಾರ ಜಾರಿಗೊಳಿಸಿದ ನಿರ್ದೇಶನಗಳಿಗೆ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ.
ನಮ್ಮನ್ನು ಕ್ಷಮಿಸಿ, ನಮಗೂ ಕೂಡ ಬೇಸರವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. ಪುರಿಯಲ್ಲಿ ಭಗವಾನ್ ಜಗನ್ನಾಥರ ರಥಯಾತ್ರೆ ವಾರ್ಷಿಕ ಆಚರಣೆಯಾಗಿದ್ದು, ಈ ಬಾರಿ ಜುಲೈ 12 ರಂದು ನಿಗದಿಯಾಗಿದೆ. ಜಗನ್ನಾಥ ಪುರಿಯಲ್ಲಿ ಮಾತ್ರ ರಥಯಾತ್ರೆಗೆ ಅವಕಾಶ ನೀಡಲಾಗಿದೆ.