ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಾಳೆ(ಸೋಮವಾರ) ದೆಹಲಿಗೆ ತೆರಳಲಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಬೆಂಬಲ ಪಡೆಯುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಕೇರಳದಲ್ಲಿ ಜಾರಿಗೆ ಬರಲಿರುವ ಹೈಸ್ಪೀಡ್ ರೈಲು ಯೋಜನೆ ಸೇರಿದಂತೆ ಇತರ ಅಭಿವೃದ್ದಿ ಯೋಜನೆಗಳ ಕುರಿತು ಪ್ರಧಾನಿ ಭೇಟಿಯ ವೇಳೆ ಕೇಂದ್ರ ಸರ್ಕಾರದ ಬೆಂಬಲ ಕೋರಲಾಗುವುದು ಎಂದು ತಿಳಿದುಬಂದಿದೆ.