ತಿರುವನಂತಪುರ: ಜುಲೈ 24 ರಂದು ನಡೆಯಲಿದ್ದ ಕೇರಳ ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕೋರ್ಸ್‍ಗಳ ಪ್ರವೇಶ ಪರೀಕ್ಷೆ (ಕೆಐಎಂ) ಮುಂದೂಡಲಾಗಿದೆ. ಜುಲೈ ಕೊನೆಯ ವಾರದಿಂದ ಜೆಇಇ ಮುಖ್ಯ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದ್ದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಹೊಸ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು.
ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಬೇಕಾದ ನಿಬಂಧನೆಗಳನ್ನು ಬಳಿಕ ಸಿದ್ಧಪಡಿಸಲಾಗುವುದು ಎಂದು ಪ್ರವೇಶ ಪರೀಕ್ಷೆಗಳ ಆಯುಕ್ತರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ www.cee.kerala.gov.in ಗೆ ಭೇಟಿ ನೀಡಬಹುದು.