ತಿರುವನಂತಪುರ: ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಸಂಜಯ್ ಎಂ. ಕೌಲ್ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ಆಯುಕ್ತರಾಗಿದ್ದ ಟೀಕಾರಾಂ ಮೀನಾ ಅವರನ್ನು ವರ್ಗಾಯಿಸಲಾಗಿದೆ. ರಾಷ್ಟ್ರೀಯ ಯೋಜನೆ ಮತ್ತು ಅರ್ಥಶಾಸ್ತ್ರÀ ಹೆಚ್ಚುವರಿ ಕಾರ್ಯದರ್ಶಿಯಾಗಿ ಮೀನಾ ಅವರನ್ನು ನಿಯೋಜಿಸಲಾಗಿದೆ.
ಕೌಲ್ ಕೇರಳ ಕೇಡರ್ ಐಎಎಸ್ ಅಧಿಕಾರಿಯಾಗಿದ್ದಾರೆ. ಮಣಿಪುರದ ಮುಖ್ಯ ಚುನಾವಣಾ ಅಧಿಕಾರಿಯನ್ನು ಕೂಡ ಸ್ಥಳಾಂತರಿಸಲಾಗಿದೆ. ರಾಜೇಶ್ ಅಗರ್ವಾಲ್ ಮಣಿಪುರದ ಹೊಸ ಮುಖ್ಯ ಚುನಾವಣಾಧಿಕಾರಿಯಾಗಿದ್ದಾರೆ. ಈ ಹಿಂದಿದ್ದ ಆಯುಕ್ತ ಪ್ರಶಾಂತ್ ಕುಮಾರ್ ಸಿಂಗ್ ಅವರನ್ನು ವರ್ಗಾಯಿಸಲಾಗಿದೆ. ಎರ್ನಾಕುಳಂ, ತ್ರಿಶೂರ್, ಕೋಝಿಕ್ಕೋಡ್, ಕಾಸರಗೋಡು, ಕೊಟ್ಟಾಯಂ ಮತ್ತು ಪತ್ತನಂತಿಟ್ಟು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನೂ ವರ್ಗಾಯಿಸಲಾಗಿದೆ.