ತಿರುವನಂತಪುರ: ವಿಧಾನಸಭೆ ದೊಂಬಿ ಪ್ರಕರಣದ ಸುಪ್ರೀಂಕೋರ್ಟ್ ನ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಸಚಿವ ಶಿವನ್ ಕುಟ್ಟಿಯನ್ನು ಸಚಿವ ಸ್ಥಾನದಿಂದ ತೆಗೆದುಹಾಕುವಂತೆ ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಸಚಿವಾಲಯದ ಎದುರು ಎಬಿವಿಪಿ ಕಾರ್ಯಕರ್ತರು ಹಮ್ಮಿಕೊಂಡ ಮೆರವಣಿಗೆ ಘರ್ಷಣೆಗೆ ಕಾರಣವಾಯಿತು.
ತಡೆಬೇಲಿ ಬೇಧಿಸಲು ಯತ್ನಿಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ಘರ್ಷಣೆ ಭುಗಿಲೆದ್ದಿತು. ನಂತರ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಜಲ ಫಿರಂಗಿಯನ್ನು ಬಳಸಿದರು. ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಲಾಯಿತು.