ನವದೆಹಲಿ: ತಜಕಿಸ್ತಾನದ ದುಶಾಂಬೆಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ತಜಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.
ಸಮಾವೇಶದಲ್ಲಿ ಭಯೋತ್ಪಾದನೆ ಮತ್ತು ಇತರ ಭದ್ರತಾ ಸವಾಲುಗಳನ್ನು ಎದುರಿಸುವ ಬಗೆಯ ಕುರಿತು ಚರ್ಚಿಸಲು ಎಸ್‌ಸಿಒನ ಎಂಟು ಸದಸ್ಯ ರಾಷ್ಟ್ರಗಳು ಪಾಲ್ಗೊಳ್ಳಲಿವೆ.
'ಜುಲೈ 29ರವರೆಗೆ ಸಮಾವೇಶ ನಡೆಯಲಿದ್ದು, ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಅವರೊಂದಿಗೂ ರಾಜನಾಥ್ ಸಿಂಗ್ ಮಾತುಕತೆ ನಡೆಸಲಿದ್ದಾರೆಯೇ ಎಂಬುದು ಖಚಿತವಾಗಿಲ್ಲ.