ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ತೀರಥ್ ಸಿಂಗ್ ರಾವತ್ ನಿನ್ನೆ ರಾಜೀನಾಮೆ ಸಲ್ಲಿಸಿದ್ದು, ಇದೀಗ ಪಕ್ಷದ ಶಾಸಕಾಂಗ ಸಭೆಯಲ್ಲಿ ಪುಷ್ಕರ್ ಸಿಂಗ್ ಧಾಮಿಯವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ವಿರುದ್ಧ ತೀವ್ರ ಭಿನ್ನಾಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ತೀರಥ್ ರಾವತ್ ಅವರು ಮಾರ್ಚ್ ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಆದರೆ ಈ ಹುದ್ದೆಯನ್ನು ಉಳಿಸಿಕೊಳ್ಳಲು ಸಂಸದರಾಗಿರುವ ರಾವತ್ ಅವರು ಸೆಪ್ಟೆಂಬರ್ 10 ರೊಳಗೆ ವಿಧಾನಸಭಾ ಸ್ಥಾನವನ್ನು ಗೆದ್ದು ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಬೇಕಿತ್ತು.