ನವದೆಹಲಿ: ಕೇರಳದಲ್ಲಿ ಕೋವಿಡ್ ವ್ಯಾಪಕತೆಯ ಹಿನ್ನೆಲೆಯಲ್ಲಿ ಕೇಂದ್ರ ತಂಡ ಕೇರಳಕ್ಕೆ ದೌಡಾಯಿಸಲಿದೆ. ಸೋಂಕಿನ ಹರಡುವಿಕೆ ಕಡಿಮೆಯಾಗದ ಕಾರಣ ಕೇಂದ್ರ ತಂಡ ರಾಜ್ಯಕ್ಕೆ ಸಮಗ್ರ ಅವಲೋಕನಕ್ಕೆ ಆಗಮಿಸಲಿದ್ದು, ನಾಳೆ ತಲಪುವರು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಗೃಹ ಸಚಿವಾಲಯ ಕೇರಳ ಮತ್ತು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಲಿದೆ ಎಂದರು.
ದೇಶದಲ್ಲಿ ಶೇ .50 ರಷ್ಟು ಕೋವಿಡ್ ಪ್ರಕರಣಗಳು ಕೇರಳದಿಂದ ವರದಿಯಾಗುತ್ತಿದೆ. ಧಾರ್ಮಿಕ ಆಚರಣೆಗಳಿಗೆ ರಾಜ್ಯ ಸರ್ಕಾರ ಇತ್ತೀಚೆಗೆ ನೀಡಿರುವ ರಿಯಾಯಿತಿ ಇದಕ್ಕೆ ಕಾರಣ ಎನ್ನಲಾಗಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ಕೂಡ ನಿರ್ಬಂಧಗಳನ್ನು ಸಡಿಲಿಸಿದ್ದರ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ. ನಿಯಂತ್ರಣಗಳನ್ನು ಬಿಗಿಗೊಳಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೊಟ್ಟಾಯಂನಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಜೂನ್ 28 ರಿಂದ 64 ಶೇ. ಹೆಚ್ಚಾಗಿದೆ. ಮಲಪ್ಪುರಂ ನಲ್ಲಿ ಶೇ 59, ಎರ್ನಾಕುಳಂ ಶೇ 46.5, ತ್ರಿಶೂರ್ ಶೇ 45.4 ರಷ್ಟು ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತನ್ನ ನಿಯಂತ್ರಣ ನಿರ್ಬಂಧಗಳನ್ನು ಕಠಿಣಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ.
ಕೇರಳದ ಸುಮಾರು 95 ಶೇ. ಕೋವಿಡ್ ರೋಗಿಗಳು ಮನೆಯ ಸಂಪರ್ಕತಡೆಯನ್ನು ಉಳಿಸಿಕೊಂಡಿದ್ದಾರೆ. ಮನೆ ಕ್ವಾರಂಟ್ಯೆನ್ ಕುರಿತು ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗಳ ಅನುಸರಣೆ ಖಚಿತಪಡಿಸಿಕೊಳ್ಳಲಾಗಿದೆ. ಕೇರಳದಲ್ಲಿರುವ ಅನ್ಯರಾಜ್ಯ ಕಾರ್ಮಿಕರು ಕೋವಿಡ್ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸಲು ಸಿದ್ಧರಾಗದಿರುವುದು ಕಂಡುಬಂದಿದೆ ಎಂದು ರಾಜೇಶ್ ಭೂಷಣ್ ಹೇಳಿದರು. ಕೋವಿಡ್ ಪೀಡಿತರಲ್ಲಿ ಕೆಲವರು ಕ್ವಾರಂಟ್ಯೆನ್, ಆರ್ಯೆಕೆ ಕೇಂದ್ರಗಳಿಗೆ ತೆರಳಲು ಸಿದ್ಧರಿಲ್ಲ. ಅವರನ್ನು ಕೌನ್ಸೆಲಿಂಗ್‌ಗೆ ಒಳಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.