ತಿರುವನಂತಪುರ: ಕೇರಳದಲ್ಲಿ ಮತ್ತೆ ಮೂವರಿಗೆ ಝೀಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಈ ಸೋಂಕಿಗೆ ಒಳಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ತಿಳಿಸಿದ್ದಾರೆ.
ಅನಾಯಾರಾ ಪ್ರದೇಶದ ಇಬ್ಬರು ನಿವಾಸಿಗಳು ಮತ್ತು ಪೆಟ್ಟಾ ವ್ಯಾಪ್ತಿಯ ಒಬ್ಬರಲ್ಲಿ ಹೊಸದಾಗಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಸಚಿವರು ಪ್ರಕಟಣೆಯಲ್ಲಿ ಹೇಳಿದ್ದಾರೆ.