ಕಾಸರಗೋಡು: ಹಿರಿಯ ಆರ್.ಎಸ್.ಎಸ್. ಕಾರ್ಯಕರ್ತ, ವ್ಯಾಪಾರಿ ಸುಜೀರ್ ಶೇಷಗಿರಿ ನಾಯಕ್ ಅವರ ನಿಧನದಿಂದ ಸಮಾಜಕ್ಕೆ ಬಲು ದೊಡ್ಡ ನಷ್ಟವಾಗಿದೆ ಎಂದು ಸಂತಾಪ ಸೂಚಕ ಸಭೆಯಲ್ಲಿ ಪ್ರಮುಖರು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಸರಗೋಡು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಂತಾಪ ಸೂಚಕ ಸಭೆಯನ್ನು ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಬಾಲನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಜೆಪಿ ಮುಖಂಡ ವಿ.ರವೀಂದ್ರನ್, ಸಿ.ಎಚ್.ಸುರೇಶ್, ಮಧೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಿಠಲ ಶೆಟ್ಟಿ, ನಿವೃತ್ತ ಅಧ್ಯಾಪಕ ಕೆ.ಎಂ.ಹೇರಳ, ಬಿಜೆಪಿ ಮುಖಂಡ ಪಿ.ರಮೇಶ್, ಹಿರಿಯ ಪತ್ರಕರ್ತ ಸುಬ್ಬಣ್ಣ ಶೆಟ್ಟಿ ಮೊದಲಾದವರು ಮಾತನಾಡಿ ಮೃತರ ಗುಣಗಾನ ಮಾಡಿದರು.
ನ್ಯಾಯವಾದಿ ಎ.ಎನ್.ಅಶೋಕ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಳಾರು ಸತೀಶ್ಚಂದ್ರ ಭಂಡಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದಭರ್Àದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಭಿಮಾನಿಗಳು ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.