ಮಂಜೇಶ್ವರ: ದೇಶೀಯ ಅಧ್ಯಾಫಕ ಪರಿಷತ್ ಎನ್.ಟಿ.ಯು ಮಂಜೇಶ್ವರ ಉಪಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟಣಾ ಧರಣಿ ನಡೆಯಿತು.
ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಸಲಾದ ಈ ಸಾಂಕೇತಿಕ ಪ್ರತಿಭಟನಾ ಧರಣಿಯನ್ನು ಉದ್ಘಾಟಿಸಿದ ಎನ್.ಟಿ.ಯು ರಾಜ್ಯ ಉಪಾಧ್ಯಕ್ಷÀ ವೆಂಕಪ್ಪ ಶೆಟ್ಟಿ ಮಾತನಾಡಿ, ಶಿಕ್ಷಕರ ನ್ಯಾಯೋಜಿತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವೃಗೊಳಿಸಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಸಿದರು.
ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ ಸತೀಶ್ ಶೆಟ್ಟಿ ಒಡ್ಡಂಬೆಟ್ಟು, ಉಪಜಿಲ್ಲಾ ಸಮಿತಿ ಉಪಾಧ್ಯಕ್ಷ ರವೀಂದ್ರ ರೈ ಕುಂಜತ್ತೂರು ಸಂದರ್ಭೋಚಿತವಾಗಿ ಮಾತನಾಡಿದರು. ಉಪಜಿಲ್ಲಾಧ್ಯಕ್ಷೆ ಚಂದ್ರಿಕಾ ಟೀಚರ್ ಅಧ್ಯಕ್ಷತೆ ವಹಿಸಿದ್ದರು. ಉಪಜಿಲ್ಲಾ ಸಮಿತಿ ಕಾರ್ಯದರ್ಶಿ ರಘುವೀರ್ ವಂದಿಸಿದರು. ಉಪಜಿಲ್ಲಾ ಖಜಾಂಚಿ ಈಶ್ವರ್ ಕಿದೂರ್ ಸ್ವಾಗತಿಸಿ ನಿರೂಪಿಸಿದರು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಖಾಲಿ ಬಿದ್ದಿರುವ ಅಧ್ಯಾಪಕ ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಬೇಕು, ಅಧ್ಯಾಪಕರನ್ನು ಅನ್ಯ ಕರ್ತವ್ಯಗಳಿಂದ ತೆರವುಗೊಳಿಸಬೇಕು, ಆನ್‍ಲೈನ್ ಕಲಿಕಾ ಸೌಲಭ್ಯವನ್ನು ಎಲ್ಲಾ ಮಕ್ಕಳಿಗೆ ಖಾತರಿಪಡಿಸಬೇಕು, ಮುಖ್ಯೋಪಾಧ್ಯಾಯರ ನೇಮಕಾತಿ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು ಎಂಬಿತ್ಯಾದಿ ಮಹತ್ವಪೂರ್ಣ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಉಪಜಿಲ್ಲಾ ವಿದ್ಯಾಧಿಕಾರಿಗೆ ಸಮರ್ಪಿಸಲಾಯಿತು.