ತಿರುವನಂತಪುರ: ಅಲ್ಪಸಂಖ್ಯಾತ ವಿದ್ಯಾರ್ಥಿವೇತನದ ಬಗ್ಗೆ ಯು.ಡಿ.ಎಫ್ ಚರ್ಚಿಸಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಹೇಳಿರುವರು. ಎಲ್ಲಾ ಅಂಶಗಳನ್ನು ಪರಿಶೀಲಿಸಲಾಗುವುದು ಮತ್ತು ಈ ವಿಷಯದಲ್ಲಿ ಯಾವುದೇ ತಪ್ಪು ತಿಳುವಳಿಕೆ ಇರುವುದಿಲ್ಲ ಎಂದು ಅವರು ಹೇಳಿದರು. ಯುಡಿಎಫ್ ಸಭೆಯಲ್ಲಿ ಮುಸ್ಲಿಂ ಲೀಗ್‍ನ ವಿರೋಧ ಸೇರಿದಂತೆ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಅವರು ಪಕ್ಷದ ಹಿರಿಯ ಮುಖಂಡರು ಮತ್ತು ಅದರ ಘಟಕ ಪಕ್ಷಗಳೊಂದಿಗೆ ವಿವರವಾದ ಚರ್ಚೆ ನಡೆಸಿರುವರು. ಯುಡಿಎಫ್‍ನಲ್ಲಿನ ಭಿನ್ನಾಭಿಪ್ರಾಯದ ಲಾಭವನ್ನು ಮುಖ್ಯಮಂತ್ರಿಗಳು ಪಡೆದುಕೊಂಡ ಹಿನ್ನೆಲೆಯಲ್ಲಿ ಯುಡಿಎಫ್ ನಿಲುವು ವಿಳಂಬವಾಗಬಾರದು ಎಂಬುದು ಹಿರಿಯ ನಾಯಕರ ಅಭಿಪ್ರಾಯವಾಗಿದೆ.