ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಸಭೆ ಜುಲೈ 10ರಂದು ಬೆಳಗ್ಗೆ 10.30ಕ್ಕೆ ಕಾಸರಗೋಡು ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಜರುಗಲಿದೆ. ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯ ಪಿ.ಕೆ ಕೃಷ್ಣದಾಸ್ ಉದ್ಘಾಟಿಸುವರು. ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶ್ರೀಕಾಂತ್ ಅಧ್ಯಕ್ಷತೆ ವಹಿಸುವರು. ಸೆಮಿ ವರ್ಚುವಲ್ ಮೂಲಕ ಸಭೆ ನಡೆಯಲಿದ್ದು, ಆಯಾ ಮಂಡಲ ಸಮಿತಿ ಪದಾಧಿಕಾರಿಗಳು, ರಾಜ್ಯ ಸಮಿತಿ ಕಾರ್ಯದರ್ಶಿ, ಕಾಸರಗೋಡು ಜಿಲ್ಲಾ ಉಸ್ತುವಾರಿ ಪಿ.ರಘುನಾಥ್, ವಲಯ ಸಂಘಟನಾ ಕಾರ್ಯದರ್ಶಿ ಕೆ.ಪಿ ಸುರೇಶ್ ಸಭೆಯಲ್ಲಿ ಪಾಲ್ಗೊಳ್ಳುವರು.