ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಪ್ರಥಮ ಚಾತುರ್ಮಾಸ್ಯ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನಾರ್ಚನೆ ಕಾರ್ಯಕ್ರಮ ಮಂಗಳವಾರ ಜರುಗಿತು. ಇದೇ ಸಂದರ್ಭ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರ ಪ್ರಥಮ ಆರಾಧನಾ ಮಹೋತ್ಸವ ನಡೆಯಿತು.
ಈ ಸಂದರ್ಭ ಉಜಿರೆಯ ಕುರಿಯ ವಿಠಲಶಾಸ್ತ್ರಿ ಸಾಂಸ್ಕøತಿಕ ಪ್ರತಿಷ್ಠಾನ ವತಿಯಿಂದ ಯಕ್ಷಗಾನಾರ್ಚನೆ ನಡೆಯಿತು. ಕಲಾವಿದರಾದ ರವಿಚಂದ್ರ ಕನ್ನಡಿಕಟ್ಟೆ, ಹೊಸಮೂಲೆ ಗಣಪತಿ ಭಟ್, ತಲ್ಪನಾಜೆ ವೆಂಕಟ್ರಮಣ ಭಟ್, ಲಕ್ಷ್ಮೀಶ ಅಮ್ಮಣ್ಣಾಯ, ಪದ್ಯಾಣ ಶಂಕರನಾರಾಯಣ ಭಟ್, ದೇಲಂತಮಜಲು ಸುಬ್ರಹ್ಮಣ್ಯ ಭಟ್ ಪಾಲ್ಗೊಂಡಿದ್ದರು. ಮಾಸಿಕ ಆರಾಧನಾ ಮಹೋತ್ಸವದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆರಾಧನಾ ಕಾರ್ಯ ನಡೆಸಿಕೊಟ್ಟರು.