ಕಾಸರಗೋಡು: ನಗರದ ಕೋಟೆಕಣಿಯ ಶ್ರೀ ರಾಮನಾಥ ಭವನ ಸಮಿತಿ ನೇತೃತ್ವದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ವಿವಿಧ ಕಾರ್ಯಕ್ರಮಗಳೊಂದಿಗೆ ಕೊರೊನಾ ಮಾನದಂಡದಂತೆ ನಡೆಯಿತು.
ಹಿರಿಯ ಪತ್ರಕರ್ತ, ಸಾಹಿತಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕೊರೊನಾ ಸಂದಭರ್Àದಲ್ಲಿ ಪತ್ರಕರ್ತರ ಸೇವೆ ಶ್ಲಾಘನೀಯ. ಕೊರೊನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿದ್ದು ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸರಗೋಡು ಪ್ರದೇಶದಲ್ಲಿ ಕನ್ನಡ ಉಳಿಸಿ ಬೆಳೆಸುವಲ್ಲಿ ಕನ್ನಡ ಪತ್ರಕರ್ತರ ಸಲ್ಲಿಸಿದ ಕೊಡುಗೆ ಅಪಾರವಾದುದು ಎಂದು ಅವರು ಹೇಳಿದರು.
ಕಾಸರಗೋಡು ನಗರಸಭೆಯ ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕಾರ್ಯ ನಿರತ ಕನ್ನಡ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ಯಾದವ್, ಹಿರಿಯ ಲೇಖಕ ವಿಷ್ಣು ಶ್ಯಾನುಭೋಗ್ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯಿಂದ 20 ಮಂದಿ ಕನ್ನಡ ಪತ್ರಕರ್ತರಿಗೆ ಆಹಾರದ ಕಿಟ್‍ಗಳನ್ನು ವರ ಪ್ರಸಾದ್ ಕೋಟೆಕಣಿ ವಿತರಿಸಿದರು. ಇದೇ ಸಂಸ್ಥೆಯಿಂದ ಕೆಲವು ದಿನಗಳ ಹಿಂದೆ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಭಕ್ತರಿಗೆ ಕಿಟ್‍ಗಳನ್ನು ವಿತರಿಸಿತ್ತು. ಕಾಸರಗೋಡು ಜನರಲ್ ಆಸ್ಪತ್ರೆಯ ರೋಗಿಗಳಿಗೆ ಹಾಗು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನೂರಾರು ಮಂದಿಗೆ ಬಿಸಿಯೂಟ ವಿತರಿಸಿತ್ತು. ಕಳೆದ ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಸಾಂಸ್ಕøತಿಕ ಭವನದ 30 ಮಂದಿ ನಿಲಯ ಕಲಾವಿದರಿಗೆ ಆಹಾರ ಕಿಟ್ ವಿತರಿಸಿತ್ತು.
ಸಾಂಸ್ಕøತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿದರು. ಸಂಘಟಕ ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಹರೀಶ್ಚಂದ್ರ ಸೂರ್ಲು ವಂದಿಸಿದರು.