ಕಾಸರಗೋಡು: ಕೇರಳದಾದ್ಯಂತ ಬಿರುಸಿನ ಮಳೆ ಸುರಿಯುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಬಿರುಸುಪಡೆದುಕೊಳ್ಳಲಿರುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ ವಿವಧ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶ, ಮಲೆನಾಡು, ಗುಡ್ಡದ ತಪ್ಪಲಲ್ಲಿ ವಾಸಿಸುತ್ತಿರುವವರು ಜಾಗ್ರತೆ ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಜುಲೈ 21ರ ವರೆಗೆ ಯೆಲ್ಲೋ ಅಲರ್ಟ್ ಹಾಗೂ 22ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.