HEALTH TIPS

ದೇಶದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಕೊವಿಡ್-19 ಕೇಸ್ ದಾಖಲಿಸಿದ ಕೇರಳ!

                  ತಿರುವನಂತಪುರಂ: ಭಾರತದಲ್ಲಿರುವ ಒಟ್ಟು ಕೊರೊನಾವೈರಸ್ ಸೋಂಕಿತ ಸಕ್ರಿಯ ಪ್ರಕರಣಗಳ ಪೈಕಿ ಕೇರಳದಲ್ಲೇ ಶೇ.51ರಷ್ಟು ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.


               ನವದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ 1 ಲಕ್ಷ ಕೊವಿಡ್-19 ಸಕ್ರಿಯ ಪ್ರಕರಣಗಳನ್ನು ವರದಿ ಮಾಡಿರುವ ಏಕೈಕ ರಾಜ್ಯ ಕೇರಳ ಎಂದು ಹೇಳಿದ್ದಾರೆ. ದೇಶದ ನಾಲ್ಕು ರಾಜ್ಯಗಳಲ್ಲಿ 10,000ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿದ್ದರೆ, 31 ರಾಜ್ಯಗಳಲ್ಲಿ 10,000ಕ್ಕಿಂತ ಕಡಿಮೆ ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದ್ದಾರೆ.

               "ಕೇರಳದಲ್ಲಿ ಕೊರೊನಾವೈರಸ್ ಸೋಂಕಿತ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವುದು. ಸೋಂಕಿತರ ಸಂಪರ್ಕಿತರನ್ನು ಪತ್ತೆ ಮಾಡುವುದರಲ್ಲಿ ಹೆಚ್ಚು ಒತ್ತು ನೀಡಬೇಕು. ಏಕೆಂದರೆ ಒಬ್ಬ ಸೋಂಕಿತನ ಸಂಪರ್ಕದಲ್ಲಿ ಇರುವವರ ಪತ್ತೆಯಲ್ಲಿ ಕೇರಳ ತುಂಬಾ ಹಿಂದೆ ಉಳಿದಿದ್ದು ಕೇವಲ ಇಬ್ಬರು ಸಂಪರ್ಕಿತರನ್ನು ಮಾತ್ರ ಪತ್ತೆ ಮಾಡುತ್ತಿದೆ. ಇದರ ಜೊತೆಗೆ ಕೇರಳದಲ್ಲಿ ಶೇ.80ರಷ್ಟು ಸೋಂಕಿತರು ಗೃಹ ದಿಗ್ಬಂಧನದಲ್ಲಿದ್ದು, ಅವರ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯ," ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

                                   ದೇಶದ 279 ಜಿಲ್ಲೆಗಳಲ್ಲಿ 100ಕ್ಕಿಂತ ಹೆಚ್ಚು ಪ್ರಕರಣ:

        ಜೂನ್ ತಿಂಗಳ ಮೊದಲ ವಾರದಲ್ಲಿ ಭಾರತದ 279 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊವಿಡ್-19 ಸಕ್ರಿಯ ಪ್ರಕರಣಗಳಿದ್ದವು. ಜುಲೈ ಮೊದಲ ವಾರದಲ್ಲಿ ದೇಶವು 107 ದಿನಗಳ ಕನಿಷ್ಠ ಹೊಸ ಪ್ರಕರಣಗಳನ್ನು ದಾಖಲಿಸಿತ್ತು. ಇಂದು 41 ಜಿಲ್ಲೆಗಳಲ್ಲಿ ವಾರದ ಪಾಸಿಟಿವಿಟಿ ದರವು ಶೇ.10ರಷ್ಟಿದೆ.

ಭಾರತದಲ್ಲಿ ಒಂದು ದಿನದಲ್ಲಿ 46,164 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 34,159 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾದವರ ಶೇಕಡಾವಾರು ಪ್ರಮಾಣ 97.63ರಷ್ಟಿದ್ದು, ಇದರ ಹೊರತಾಗಿ 3,33,725 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

                            ಕೇರಳದಲ್ಲಿ 30,000ಕ್ಕೂ ಹೆಚ್ಚು ಹೊಸ ಪ್ರಕರಣ:

      ಕೇರಳದಲ್ಲಿ ಪಾಸಿಟಿವಿಟಿ ದರ ಶೇ.18.03ರಷ್ಟಿದೆ. ಒಂದು ದಿನದಲ್ಲಿ 30,007 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 18,997 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 162 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 20,134 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ 1,81,209 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

                        ಓಣಂ ಹಬ್ಬದ ಬೆನ್ನಲ್ಲೇ ಕೊವಿಡ್-19 ಮಹಾಸ್ಫೋಟ:

           ಕೇರಳದಲ್ಲಿ ಓಣಂ ಹಬ್ಬದ ಆಚರಣೆ ಬೆನ್ನಲ್ಲೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.30ರಷ್ಟು ಏರಿಕೆ ಕಂಡು ಬಂದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಂದೇ ದಿನ 31,445 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 215 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 19,972ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಂದು ದಿನದಲ್ಲಿ 1,65,273 ಮಂದಿಗೆ ಕೊವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರವು ಶೇ.19.3ರಷ್ಟಿದೆ. ಆಗಸ್ಟ್ 23ರ ಓಣಂ ಹಬ್ಬದ ದಿನ ಕೇರಳದಲ್ಲಿ 17,106 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 83 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು. ಅಂದು ರಾಜ್ಯದಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ದರ ಶೇ.17.73ರಷ್ಟಿತ್ತು. ಮಂಗಳವಾರ ಪಾಸಿಟಿವಿಟಿ ದರವು 18.04ಕ್ಕೆ ಏರಿಕೆಯಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries