ನವದೆಹಲಿ: ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 10 ದಿನಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ವಿವಾದ ಸಂಬಂಧ ನಿನ್ನೆಯಷ್ಟೇ ಸುಪ್ರೀಂಕೋರ್ಟ್'ಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಪ್ರತಿಪಕ್ಷದ ನಾಯಕರು, ಪತ್ರಕರ್ತರು ಮತ್ತು ಇತರರನ್ನು ಗುರಿಯಾಗಿಸಲು ಇಸ್ರೇಲಿ ಕಂಪನಿ. ಪೆಗಾಸಸ್ ಸ್ಪೈವೇರ್ ಅನ್ನು ಬಳಸಲಾಗಿದೆ ಎಂಬ ಇತ್ತೀಚಿನ ವರದಿಗಳಿಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು.
ಪಟ್ಟಭದ್ರ ಹಿತಾಸಕ್ತಿಗಳಿಂದ ಹರಡಿರುವ ಯಾವುದೇ ತಪ್ಪು ನಿರೂಪಣೆಯನ್ನು ಹೋಗಲಾಡಿಸಲು ಮತ್ತು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಶೀಲಿಸುವುದ್ಕಕಾಗಿ ನಾವು ತಜ್ಞರ ಸಮಿತಿಯನ್ನು ರಚಿಸುತ್ತೇವೆ. ಅದು ಸಮಸ್ಯೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಲಿದೆ ಎಂದು ಹೇಳಿತ್ತು.