ನವದೆಹಲಿ: ಶಾಲೆಯಿಂದ ಹೊರಗುಳಿದಿರುವ ಸುಮಾರು 15 ಕೋಟಿ ಮಕ್ಕಳನ್ನು ಶಿಕ್ಷಣ ವ್ಯವಸ್ಥೆಗೆ ವಾಪಸ್ ಕರೆತರಲು ಕೇಂದ್ರ ಸರ್ಕಾರವು ಬಯಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ʼಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆʼ ಕುರಿತ ವಿಶೇಷ ವರ್ಚುವಲ್ ಸಮಾವೇಶದಲ್ಲಿ ಅವರು ಮಾತನಾಡಿದರು.
ʼಇಂದು 35 ಕೋಟಿ ಮಕ್ಕಳು ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, 15 ಕೋಟಿ ಮಕ್ಕಳು ಇನ್ನೂ ಶಿಕ್ಷಣದಿಂದ ಹೊರಗುಳಿದಿದ್ದಾರೆ. ನಾವು ಅವರನ್ನೆಲ್ಲ ಮತ್ತೆ ಶಿಕ್ಷಣ ವ್ಯವಸ್ಥೆಗೆ ಕರೆತರಲು ಬಯಸುತ್ತೇವೆʼ ಎಂದು ಹೇಳಿದ್ದಾರೆ.
ಮುಂದುವರಿದು, ಸರ್ಕಾರವು ಇದೇ ಮೊದಲ ಬಾರಿಗೆ ಶಿಕ್ಷಣ ಮತ್ತು ಕೌಶಲ್ಯ ಇಲಾಖೆಗಳನ್ನು ಸಂಯೋಜಿಸುವ ಮೂಲಕ ಉತ್ತಮ ಜೀವನೋಪಾಯಕ್ಕೆ ಹೊಸ ಆಯಾಮ ನೀಡಿದೆ ಎಂದಿದ್ದಾರೆ.