ನವದೆಹಲಿ: ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಆಗಸ್ಟ್ 17 ರಿಂದ 22 ರವರೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಗೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಳೆದ ಜೂನ್ 24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಹಾಗೂ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದರು.
2019 ರ ಆಗಸ್ಟ್ 5 ರಂದು ಕೇಂದ್ರ ಸರ್ಕಾರ ಸಂವಿಧಾನದ 370 ನೇ ವಿಧಿ ತೆಗೆದುಹಾಕಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿತ್ತು. ಬಳಿಕ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿತ್ತು. ಈ ಬೆಳವಣಿಗೆ ಬಳಿಕ ಜೂನ್ 24 ರಂದು ಮೊದಲ ಬಾರಿಗೆ ಮೋದಿಯವರು ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ಪಕ್ಷಗಳ ನಡುವೆ ಮಾತುಕತೆ ನಡೆಸಿದ್ದರು. ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಮಾರು 14 ಮಂದಿ ರಾಜಕೀಯ ನಾಯಕರು ಭಾಗವಹಿಸಿದ್ದರು.