HEALTH TIPS

ಕೋವಿಡ್-19: ಮತ್ತೆ ಏರಿಕೆಯಾದ ಕೋವಿಡ್ ಸೋಂಕು, 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆ

             ನವದೆಹಲಿದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.


           ಭಾರತದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ 42,982 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 533 ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 4,26,290ಕ್ಕೆ ಏರಿಕೆಯಾಗಿದೆ.

           ಕಳೆದ 24 ಗಂಟೆಗಳ ಅವಧಿಯಲ್ಲಿ 41,726 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 3,09,74,748ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,11,076 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

           ನಿನ್ನೆ ದೇಶಾದ್ಯಂತ 16,64,030 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೇಶದಲ್ಲಿ ಈ ವರೆಗೂ ನಡೆಸಿದ ಕೋವಿಡ್ ಪರೀಕ್ಷೆಗಳ ಸಂಖ್ಯೆ 47,48,93,363ಕ್ಕೆ ಏರಿಕೆಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries