ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಸಾಂಕ್ರಾಮಿಕ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣಗಳು ಮತ್ತು 491 ಸಾವು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶಾದ್ಯಂತ 24 ಗಂಟೆಗಳಲ್ಲಿ 39,070 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 3,19,34,455ಕ್ಕೆ ಏರಿಕೆಯಾಗಿದೆ.
ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 491 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,27,862ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ದೇಶಾದ್ಯಂತ 43,910 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಗುಣಮುಖರ ಸಂಖ್ಯೆ 3,10,99,771 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 4,06,822 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 55,91,657 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಿದ್ದು ಆ ಮೂಲಕ ದೇಶದಲ್ಲಿ ಒಟ್ಟಾರೆ ಲಸಿಕೆ ವಿತರಣೆ ಪ್ರಮಾಣ 50,68,10,492ಕ್ಕೆ ಏರಿಕೆಯಾಗಿದೆ.