ನವದೆಹಲಿ: 2020ರಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ(ಜೆಎನ್‌ಯು) ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆ ನಡೆಸಿದರೂ ದೆಹಲಿ ಪೊಲೀಸರು ಯಾರನ್ನೂ ಬಂಧಿಸಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ.
ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಸಂತ್ ಕುಂಜ್(ಉತ್ತರ) ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಗಾಗಿ ಕ್ರೈಂ ಬ್ರಾಂಚ್ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದೆ ಎಂದು ದೆಹಲಿ ಪೊಲೀಸರು ವರದಿ ನೀಡಿರುವುದಾಗಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಹೇಳಿದ್ದಾರೆ.
ಜನವರಿ, 2020ರಲ್ಲಿ "ನಡೆಸಿದ ತನಿಖೆಯು ಸಾಕ್ಷಿಗಳ ಪರೀಕ್ಷೆ; ದೃಶ್ಯಾವಳಿಗಳ ಸಂಗ್ರಹ ಮತ್ತು ವಿಶ್ಲೇಷಣೆ; ಮತ್ತು ಗುರುತಿಸಲ್ಪಟ್ಟ ಶಂಕಿತರ ವಿಚಾರಣೆ ನಡೆಸಲಾಗಿದೆ. ದೆಹಲಿ ಪೊಲೀಸರು ವರದಿ ಮಾಡಿದಂತೆ, ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ" ಎಂದು ಡಿಎಂಕೆ ಸದಸ್ಯ ದಯಾನಿಧಿ ಮಾರನ್ ಅವರ ಪ್ರಶ್ನೆಗೆ ರೈ ಅವರು ಲಿಖಿತ ಉತ್ತರ ನೀಡಿದ್ದಾರೆ.