ತಿರುವನಂತಪುರಂ: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 34 ವರದಕ್ಷಿಣೆ ಕಿರುಕುಳ ಸಾವುಗಳು ಸಂಭವಿಸಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಲ್ಲಿಸಿರುವ ವರದಿಯು ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಒಳಗೊಂಡಿದೆ. ಎಲ್ಲಾ 34 ಪ್ರಕರಣಗಳಲ್ಲಿ ಆರೋಪಿಗಳಿಗಳಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ.
ಮುಖ್ಯಮಂತ್ರಿಗಳು 2018 ರಿಂದ 2020 ರ ಅಂಕಿಅಂಶಗಳನ್ನು ಮತ್ತು ಇದಕ್ಕೆ ಸಂಬಂಧಿಸಿದ ವಿವರಗಳನ್ನು ವಿಧಾನಸಭೆಯಲ್ಲಿ ಸಲ್ಲಿಸಿದ್ದಾರೆ. 34 ಪ್ರಕರಣಗಳಲ್ಲಿ 20 ಪ್ರಕರಣಗಳಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಬಿ) ಅಡಿಯಲ್ಲಿ ಪೋಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ.
2018 ರಲ್ಲಿ ವರದಕ್ಷಿಣೆ ಕಿರುಕುಳ ಸಂಬಂಧ 18 ಸಾವುಗಳು ವರದಿಯಾಗಿವೆ. 2019 ರಲ್ಲಿ 10 ಮತ್ತು 2020 ರಲ್ಲಿ ಆರು ಸಾವುಗಳು ಸಂಭವಿಸಿವೆ. ಕಳೆದ 10 ವರ್ಷಗಳಲ್ಲಿ, ವರದಕ್ಷಿಣೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗಕ್ಕೆ ಬಂದ ದೂರುಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಈ ಅವಧಿಯಲ್ಲಿ ಪಡೆದ ಕೆಲವೇ ದೂರುಗಳನ್ನು ಆಯೋಗವು ಮಧ್ಯಪ್ರವೇಶಿಸಿ ಪರಿಹರಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿರುವರು.