HEALTH TIPS

ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ

               ಚೆನ್ನೈ: ಬಂಗಾಳ ಕೊಲ್ಲಿಯ ಸಮುದ್ರದಾಳದಲ್ಲಿ ಮಂಗಳವಾರ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ 5.1ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ ತಿಳಿಸಿದೆ.

                  ಚೆನ್ನೈನಿಂದ ಸುಮಾರು 300 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ 12.35ರ ಸುಮಾರಿಗೆ ಭೂಕಂಪ ಸಂಭವಿಸಿದೆ.

                  ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಆದರೆ ನಗರದ ಕೆಲವು ಭಾಗಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಅಡ್ಯಾರ್‌ ಮತ್ತು ಸಮೀಪದ ತಿರುವಾನ್ಮಿಯೂರ್‌ಗಳಲ್ಲಿನ ನಿವಾಸಿಗಳಿಗೆ ಲಘು ಕಂಪನದ ಅನುಭವವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries