ಮಂಜೇಶ್ವರ: ಕೇರಳ ತುಳು ಅಕಾಡೆಮಿಯ ನೇತೃತ್ವದಲ್ಲಿ ಆಟಿ ಮಾಸಾಚರಣೆಯ ಅಂಗವಾಗಿ ಆ.6 ರಂದು ಅಪರಾಹ್ನ 2 ರಿಂದ ಆಟಿದ ಒರ್ಮೆ ವಿಶೇಷ ಕಾರ್ಯಕ್ರಮ ಹೊಸಂಗಡಿ ದುರ್ಗಿಪಳ್ಳದಲ್ಲಿರುವ ತುಳು ಭವನದಲ್ಲಿ ನಡೆಯಲಿದೆ.
ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್ ಕಾಸರಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸುವರು. ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಗಿಳಿವಿಂಡಿನ ಕಾರ್ಯದರ್ಶಿ ಕೆ.ಆರ್.ಜಯಾನಂದ, ಕುಂಬಳೆಯ ಪಾರ್ತಿಸುಬ್ಬ ಯಕ್ಷಗಾನ ಕಲಾಕ್ಷೇತ್ರದ ಕಾರ್ಯದರ್ಶಿ ಡಿ.ಬೂಬ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಈ ಸಂದರ್ಭ ಕಾಸರಗೋಡು ಸರ್ಕಾರಿ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಚೇವಾರು ಅವರಿಂದ ಆಟಿದ ಒರ್ಮೆ ವಿಷಯದ ಬಗ್ಗೆ ವಿಚಾರ ಮಂಡನೆ ನಡೆಯಲಿದೆ.