ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ 613 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 326 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು.
ನಿಗಾ
ಕಾಸರಗೋಡು ಜಿಲ್ಲೆಯಲ್ಲಿ 19117 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 18232 ಮಂದಿ, ಸಾಂಸ್ಥಿಕವಾಗಿ 885 ಮಂದಿ ನಿಗಾದಲ್ಲಿರುವರು. ನೂತನವಾಗಿ 1523 ಮಂದಿ ನಿಗಾ ಪ್ರವೇಶಿಸಿದ್ದಾರೆ. 1181 ಮಂದಿ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 6527 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1870 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 121735 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 115955 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 4792 ಮಂದಿ ಕೋವಿಡ್ ಸಂಬಂಧ ಮೃತಪಟ್ಟಿದ್ದಾರೆ.