ಕಾಸರಗೋಡು: ಕೇರಳದಿಂದ ಕರ್ನಾಟಕಕ್ಕೆ ತೆರಲಲು ಹೇರಿರುವ ನಿರ್ಬಂಧಕ್ಕೆ ಪರಿಹಾರ ಕೋರಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಶಾಸಕ ಎಕೆಎಂ ಅಶ್ರಫ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕೇರಳದ ಜನರ ಮೇಲೆ ಕಠಿಣ ನಿರ್ಬಂಧಗಳನ್ನು ಹೇರುವ ಕರ್ನಾಟಕ ಸರ್ಕಾರದ ಕ್ರಮವನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ.
ಎರಡು ಡೋಸ್ ಲಸಿಕೆ ಪಡೆದ ನಂತರವೂ ಕರ್ನಾಟಕಕ್ಕೆ ಬರುವವರು 72 ಗಂಟೆಗಳಲ್ಲಿ ಆರ್‍ಟಿಪಿಸಿಆರ್ ಫಲಿತಾಂಶವನ್ನು ಪಡೆಯಬೇಕು ಎಂಬ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪ್ರಶ್ನಿಸಲಾಗಿದೆ. ಕರ್ನಾಟಕ ಸರ್ಕಾರದ ನಿಲುವು ಸಂವಿಧಾನದಿಂದ ಖಾತರಿಪಡಿಸಿರುವ ನೈಸರ್ಗಿಕ ನ್ಯಾಯದ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.