ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 934 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 594 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು.
ನಿಗಾ
ಕಾಸರಗೋಡು ಜಿಲ್ಲೆಯಲ್ಲಿ 27396 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 26188 ಮಂದಿ ಮನೆಗಳಲ್ಲಿ, 1208 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 782 ಮಂದಿ ನಿಗಾ ಪ್ರವೇಶಿಸಿದ್ದಾರೆ. 1724 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 6922 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 2100 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಟೆಸ್ಟ್ ಪಾಸಿಟಿವಿಟಿ ರೇಟ್
ಕಾಸರಗೋಡು ಜಿಲ್ಲೆಯ ಬುಧವಾರದ ಟೆಸ್ಟ್ ಪಾಸಿಟಿವಿಟಿ ರೇಟ್ 9.8 ಆಗಿದೆ.
ಒಟ್ಟು ಗಣನೆ
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 110487 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 102266 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 7347 ಮಂದಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 356 ಆಗಿದೆ.