ಕಾಸರಗೋಡು: ಪೆರಿಯದ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಯನ ವಿಭಾಗವನ್ನು ಸ್ಥಾಪನೆ ಮಾಡಲಾಗಿದ್ದು, 2019 ರಿಂದ ಕನ್ನಡ ಎಂಎ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ. ಮಾನ್ಯತೆಯನ್ನು ಪಡೆದಿರುವ ವಿಶ್ವವಿದ್ಯಾನಿಯದಿಂದ ಯಾವುದೇ ಪದವಿಯಲ್ಲಿ ಕನಿಷ್ಠ ಶೇಕಡ 50 ಅಂಕಗಳನ್ನು ಪಡೆದಿದ್ದು, ಕನ್ನಡವನ್ನು ಭಾಷೆಯಾಗಿ ಅಥವಾ ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿ ಶೇಕಡ 50 ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಹಾಗೂ ಶೇಕಡ 45 ಅಂಕಗಳನ್ನು ಪಡೆದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕನ್ನಡ ಎಂಎ ಪದವಿ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ. ಒಟ್ಟು 50 ಅಭ್ಯರ್ಥಿಗಳಿಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು www.cucet.nta.nic.in ಇಲ್ಲಿ ಅರ್ಜಿ ಸಲ್ಲಿಸಬಹುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.