ಕಾಸರಗೋಡಿನಿಂದ ದ.ಕ. ಜಿಲ್ಲೆಗೆ ಬರುವವರಿಗೆ ಆಗಸ್ಟ್ ೧ರಿಂದ ನೆಗೆಟಿವ್ ವರದಿ ಕಡ್ಡಾಯ ಎಂಬ ಆದೇಶವನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನೀಡಿದ್ದಾರೆ. ಇದರಿಂದಾಗಿ ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳಿಗೆ ಸಮಸ್ಯೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದ ವಿದ್ಯಾರ್ಥಿಗಳು ನಿರಂತರ ಮನವಿ ಮಾಡಿದ್ದು, ಇದಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಸ್ಪಂದಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಪರೀಕ್ಷ ಪ್ರವೇಶ ಪತ್ರ ತೋರಿಸಿ ಸಂಚಾರ ನಡೆಸಬಹುದೆಂದು ಸೂಚಿಸಲಾಗಿದೆ.
ಪ್ರತ್ಯೇಕ ಪರೀಕ್ಷೆ: