ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಒಂದು ತಿಂಗಳ ಕಾರ್ಯಗಾರವನ್ನು ಆಯೋಜನೆ ಮಾಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ದಕ್ಷಿಣ ಕನ್ನಡ ಜಿಲ್ಲೆಯಿಂದ ನೇಮಕಾತಿ ಹೊಂದುತ್ತಿರುವಂತಹ ಅಧಿಕಾರಿ ಮತ್ತು ಸಿಬ್ಬಂದಿಗಳ ಸಂಖ್ಯೆ ಬಹಳ ಕಡಿಮೆಯಾಗುತ್ತಿದೆ.
ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಉದ್ದೇಶದಿಂದ ಒಂದು ತಿಂಗಳ ಕಾರ್ಯಗಾರ ಆಯೋಜನೆ ಮಾಡಲಾಗಿದೆ. ಪೊಲೀಸ್ ಇಲಾಖೆಗೆ ಇತ್ತೀಚಿನ ತಂಡಗಳಲ್ಲಿ ನೇಮಕಾತಿ ಹೊಂದಿದ ಪಿ.ಎಸ್.ಐ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನುರಿತ ತಂಡ ತರಬೇತಿ ನೀಡಲಿದೆ.
ಒಂದು ತಿಂಗಳ ಕಾಲ ತರಬೇತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ, ಮಾನದಂಡಗಳ ಪಟ್ಟಿಯನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಅರ್ಹತೆಗಳು
* ವಿಳಾಸದ ಬಗ್ಗೆ ಅಧಿಕೃತ ದಾಖಲಾತಿ ಸಲ್ಲಿಸುವುದು
* ಯಾವುದೇ ಘಟಕದಲ್ಲಿ ಪಿಎಸ್‌ಐ/ ಪಿ.ಸಿ ನೇಮಕಾತಿಯ ಇಟಿ/ಪಿಎಸ್ಟಿ (ಫಿಸಿಕಲ್ ಟೆಸ್ಟ್) ನಲ್ಲಉತ್ತೀರ್ಣಗೊಂಡ ಬಗ್ಗೆ ದಾಖಲಾತಿ ಸಲ್ಲಿಸುವುದು ಕಡ್ಡಾಯ
* ಅಭ್ಯರ್ಥಿಗಳು RTPCR ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು
* ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮೊದಲ ಆದ್ಯತೆ. ನಂತರ ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.
* ಇದು ಕ್ರ್ಯಾಶ್ ಕೋರ್ಸ್ ರೀತಿಯ 30 ದಿನಗಳ ಕಾರ್ಯಾಗಾರವಾಗಿದ್ದು, ಪುರುಷ ಮತ್ತು ಮಹಿಳಾ ಆಕಾಂಕ್ಷಿಗಳಿಗೆ ಅವಕಾಶವಿದೆ.
* ಮೊದಲನೇ ಹಂತದಲ್ಲಿ 100 ಅಭ್ಯರ್ಥಿ/ ಆಕಾಂಕ್ಷಿಗಳಿಗೆ ತರಬೇತಿಯನ್ನು ನೀಡಲಾಗುವುದು
* ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯ ಉಚಿತವಾಗಿದ್ದು, ಕಡ್ಡಾಯವಾಗಿ ನಿಗದಿಪಡಿಸಿದ ಸ್ಥಳದಲ್ಲಿಯೇ ವಾಸ್ತವ್ಯವಿರಬೇಕು (ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಇದೆ)
* ತರಗತಿ, ತರಬೇತಿ, ಓದುವುದು ಮುಂಜಾನೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಡ್ಡಾಯ. ಅಭ್ಯರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದು.
* ಅವಶ್ಯಕ ಅಧ್ಯಯನ ಸಾಮಾಗ್ರಿಗಳನ್ನು ವೈಯುಕ್ತಿಕವಾಗಿ ಅಭ್ಯರ್ಥಿಗಳೇ ಖರೀದಿ ಮಾಡಬೇಕು.
ಈ ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಆಕಾಂಕ್ಷಿಗಳು 9/8/2021ರಿಂದ ಮಂಗಳೂರು ಪೊಲೀಸ್ ಕಮೀಷನರ್ ಕಛೇರಿಯಲ್ಲಿ ತೆರೆಯಲಾಗುವ REGISTRATION DESK ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಸಬಹುದು.
ಈ ಕಾರ್ಯಾಗಾರಕ್ಕೆ ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿಯು ವಾಸ್ತವ್ಯ, ಕ್ಲಾಸ್ ರೂಂ ಮತ್ತು ಲೈಬ್ರೆರಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದೆ. ಆಸಕ್ತರು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಈ ಕಾರ್ಯಗಾರದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕರೆ ನೀಡಲಾಗಿದೆ.
ಪೊಲೀಸ್ ಇಲಾಖೆ ಸೇರಲು ಅವಕಾಶ ಪೊಲೀಸ್ ಇಲಾಖೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶವಿದೆ. ಕರ್ನಾಟಕ ರಾಜ್ಯದ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 250 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ವೃಂದ ಮತ್ತು ನೇಮಕಾತಿ) ನಿಯಮ 2020ರ ಪ್ರಕಾರ ಅನುಯಾಯಿ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಹೊಂದಿರಬೇಕು.
ಸುತ್ತೋಲೆ ಅನ್ವಯ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳು ಈ ಕೆಳಕಂಡಂತೆ ಇರುತ್ತವೆ.
* ಸಿಬಿಎಸ್‌ಇ ಮತ್ತು ಐಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 10 ಪರೀಕ್ಷೆ
* ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಯು ನಡೆಸುವ ಕ್ಲಾಸ್ 10 ಪರೀಕ್ಷೆ
* ನ್ಯಾಷನಲ್ ಇನ್ಸ್‌ಸ್ಟಿಟ್ಯುಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯುವ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್