ಕಾಸರಗೋಡು: ಜನಪರ ಯೋಜನೆಯ 25ನೇ ವರ್ಷಾಚರಣೆ (ಬೆಳ್ಳಿಹಬ್ಬ ಆಚರಣೆ)ಗೆ ಮಂಗಳವಾರ ಚಾಲನೆ ಲಭಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಈ ಸರಣಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿವೆ.
ಕಾಸರಗೋಡು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಯೋಜನೆ ಸಮಿತಿ ವತಿಯಿಂದ ಬೆಳ್ಳಿಹಬ್ಬವನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಸಮಾರಂಭ ಅಂಗವಾಗಿ ಜಿಲ್ಲಾಧಿಕಾರಿ ಕಚೇಋಇ ಆವರಣದ ಮಿಯಾವಾಕಿ ಉದ್ಯಾನವನ್ನು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಉದ್ಘಾಟಿಸಿದರು.
ಮಾಜಿ ಹಣಕಾಸು ಸಚಿವ ಡಾ.ಟಿ.ಎಂ.ಥಾಮಸ್ ಐಸಕ್ ಪ್ರಧಾನ ಭಾಷಣ ಮಾಡಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎ.ಕೆ.ಎಂ.ಅಶ್ರಫ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ್ವಆನವಾಝ್ ಪಾದೂರು, ಕಾರ್ಯದರ್ಶಿ ಪಿ.ನಂದಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ವಿವಿಧ ಜನಪ್ರತಿನಿಧಿಗಳಿಗೆ, ಜನಪರ ಯೋಜನೆಯ ಕಾರ್ಯಕರ್ತರಿಗೆ, ಸಿಬ್ಬಂದಿಗೆ ಮೊದಲಾದವರಿಗೆ ಅಭಿನಂದನೆ ನಡೆಯಿತು. ಜಿಲ್ಲೆಯ ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳಲ್ಲೂ ಜನಪರ ಯೋಜನೆಯ ಬೆಳ್ಳಿಹಬ್ಬ ಆಚರಣೆಗೆ ಚಾಲನೆ ಲಭಿಸಿದೆ.