ಕೊಚ್ಚಿ: ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಭಾನುವಾರ 10 ಸೆ.ಮೀ. ಮಳೆ ಸುರಿದಿದೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶ್ಯೂರ್, ಪಾಲಕ್ಕಾಡ್, ಮಲಪ್ಪುರ, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಆಗಸ್ಟ್ 30ರವರೆಗೆ ಸಮುದ್ರಕ್ಕಿಳಿಯಬಾರದು ಎಂದು ಐಎಂಡಿ ಎಚ್ಚರಿಕೆ ನೀಡಿದೆ.