HEALTH TIPS

ಕರ್ನಾಟಕದಲ್ಲಿ ಕೇರಳದ ವೈದ್ಯಕೀಯ, ತಾಂತ್ರಿಕ ವಿದ್ಯಾರ್ಥಿಗಳಿಗೆ ವಿಶೇಷ ವಿನಾಯಿತಿ

             ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 7 ದಿನ ಕಡ್ಡಾಯ ಸಾಂಸ್ಥಿಕ ದಿಗ್ಬಂಧನದಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಸಾಂಸ್ಥಿಕ ದಿಗ್ಬಂಧನ ಕ್ರಮವನ್ನು ರಾಜ್ಯ ಸರ್ಕಾರ ತೆರವುಗೊಳಿಸಿದೆ.

            ಕೇರಳದಿಂದ ಆಗಮಿಸುವ ವೈದ್ಯಕೀಯ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ. ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳು 7 ದಿನಗಳ ಸಾಂಸ್ಥಿಕ ದಿಗ್ಬಂಧನಕ್ಕೊಳಗಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನರ್ಸಿಂಗ್, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು 72 ಗಂಟೆಗಳ ಹಿಂದೆ ಪರೀಕ್ಷಿಸಿದ RT-PCR ನೆಗೆಟಿವ್ ವರದಿ ಸಾಕಾಗುತ್ತದೆ.

          ವಿದ್ಯಾರ್ಥಿಗಳ ಹೊರತಾಗಿ ಕೇರಳದಿಂದ ಆಗಮಿಸುವ ಪ್ರತಿಯೊಬ್ಬರಿಗೂ 7 ದಿನ ಸಾಂಸ್ಥಿಕ ದಿಗ್ಬಂಧನ ಹಾಗೂ RT-PCR ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಮಾಡುತ್ತಿರುವ ಕೇರಳ ಉದ್ಯೋಗಿಗಳಿಗೂ ಅಥವಾ ಇತ್ತೀಚಿಗೆ ಕೇರಳಕ್ಕೆ ಭೇಟಿ ನೀಡಿ ರಾಜ್ಯಕ್ಕೆ ವಾಪಸ್ಸಾದ ಪ್ರತಿಯೊಬ್ಬರಿಗೂ ಸಾಂಸ್ಥಿಕ ದಿಗ್ಬಂಧನದ ಕ್ರಮ ಕಡ್ಡಾಯವಾಗಿರುತ್ತದೆ.

                                ವಿದ್ಯಾರ್ಥಿಗಳ ಪರೀಕ್ಷೆಗೆ ಅನುಕೂಲ:

      ಕೊರೊನಾವೈರಸ್ ಮಾರ್ಗಸೂಚಿಗಳು ಜಾರಿಯಲ್ಲಿರುವ ವೇಳೆ ವಾರಾಂತ್ಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಪರೀಕ್ಷೆಗಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಪುನಾರಂಭಿಸುವುದರ ಸಂಬಂಧ ತೆಗೆದುಕೊಂಡ ಕ್ರಮದ ಬೆನ್ನಲ್ಲೇ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ.

                     ರಾಜ್ಯದ ಹಲವು ಜಿಲ್ಲೆಗಳಲ್ಲಿ 6ನೇ ತರಗತಿ ಪುನಾರಂಭ:

           ಕರ್ನಾಟಕದಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರವನ್ನು ಹೊಂದಿರುವ ಜಿಲ್ಲೆಗಳಲ್ಲಿ 6ನೇ ತರಗತಿಯಿಂದ ಶಾಲೆಗಳನ್ನು ಆರಂಭಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಕಳೆದ ಆಗಸ್ಟ್ ತಿಂಗಳಿನಿಂದಲೇ 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಯನ್ನು ಪುನಾರಂಭಿಸಲಾಗಿದೆ.

                      ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ:

      ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ನೆರೆ ರಾಜ್ಯಗಳಿಂದ ಕರ್ನಾಟಕ ಕ್ಕೆ ಹೆಚ್ಚಿನ ಅಪಾಯವಿರುವುದರ ಹಿನ್ನೆಲೆ ಗಡಿ ಜಿಲ್ಲೆಗಳನ್ನು ಕಟ್ಟುನಿಟ್ಟಿನ ತಪಾಸಣೆಯನ್ನು ನಡೆಸಲಾಗುತ್ತಿದೆ. ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಗಡಿ ಚೆಕ್ ಪೋಸ್ಟ್ ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲು ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲೂ ಕಣ್ಗಾವಲು ಇರಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries