ಬೆಂಗಳೂರು: ಕೇರಳದಿಂದ ಆಗಮಿಸುವವರಿಗೆ ಕರ್ನಾಟಕ ಸರ್ಕಾರ ಏಳು ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಿದೆ. ಎಂಟನೇ ದಿನ, ಆರ್ಟಿ-ಪಿಸಿಆರ್ ಪರೀಕ್ಷೆಯು ನಕಾರಾತ್ಮಕವಾಗಿದ್ದರೆ ಮಾತ್ರ ಬಿಡುಗಡೆ ಮಾಡಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಎರಡು-ಡೋಸ್ ಲಸಿಕೆ ಪಡೆದ ಪ್ರಮಾಣಪತ್ರ ಮತ್ತು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಇನ್ನು ಮುಂದೆ ಪರಿಗಣಿಸಲಾಗುವುದಿಲ್ಲ. ಸರ್ಕಾರಿ ಕೇಂದ್ರಗಳÀಲ್ಲಿ ಕ್ವಾರಂಟೈನ್‍ನಲ್ಲಿ ಏಳು ದಿನಗಳ ಕಾಲ ಇರಬೇಕು. ಕೇರಳದಲ್ಲಿ ಪರೀಕ್ಷಾ ಸಕಾರಾತ್ಮಕ ದರ ಹೆಚ್ಚಿರುವ ಕಾರಣ ನಿರ್ಬಂಧಗಳನ್ನು ಬಿಗಿಗೊಳಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿಬರ್ಂಧಗಳು ಮುಂದುವರಿಯಲಿವೆ. ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿನ್ನೆ ಕೇವಲ 973 ಪ್ರಕರಣಗಳು ವರದಿಯಾಗಿವೆ.