ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಂಬಂಧಿ ವೈ. ವಿ ಸುಬ್ಬಾರೆಡ್ಡಿ ಅವರನ್ನು ತಿರುಪತಿ ತಿರುಮಲ ದೇಗುಲದ ಆಡಳಿತ ಮಂಡಳಿಯ(ಟಿಟಿಡಿ) ಅಧ್ಯಕ್ಷರಾಗಿ ಭಾನುವಾರ ಮರು ನೇಮಕ ಮಾಡಲಾಗಿದೆ.
ಈ ಸಂಬಂಧ ಪ್ರಧಾನ ಕಾರ್ಯದರ್ಶಿ (ಕಂದಾಯ-ದತ್ತಿಗಳು) ಜಿ. ವಾಣಿ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ. ಮಂಡಳಿಯ ಇತರ ಸದಸ್ಯರನ್ನು ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.
ಮಾಜಿ ಸಂಸದ ಸುಬ್ಬಾ ರೆಡ್ಡಿ ಅವರು ಈ ವರ್ಷ ಜೂನ್‌ಗೆ ಕೊನೆಗೊಂಡಂತೆ ಎರಡು ವರ್ಷಗಳ ಅವಧಿಗೆ ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸುಬ್ಬಾರೆಡ್ಡಿ ಅವರನ್ನು ಆಂಧ್ರಪ್ರದೇಶದ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬಂದಿತ್ತು.