ಕಾಸರಗೋಡು: ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಕೃಷಿಗೆ ಕಾಡುಪ್ರಾಣಿಗಳು ವ್ಯಾಪಕವಾಗಿ ಕೃಷಿ ಹಾನಿಗೈಯುವ ಮೂಲಕ ಜನಜೀವನ ಸಂಕಷ್ಟಕ್ಕೆ ತಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಶೀಘ್ರ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ ತೀರ್ಮಾನಿಸಿದೆ.
ಆಗಸ್ಟ್ 6ರಂದು ಸಂಜೆ 6ಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆನ್‍ಲೈನ್ ಮೂಲಕ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಅರಣ್ಯ ಅಂಚಿಗೆ ಸೋಲಾರ್ ಬೇಲಿ ನಿರ್ಮಾಣಕಾರ್ಯ ಮುಂದುವರಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ. ಕಾಡುಪ್ರಾಣಿಗಳಿಂದ ಹಾನಿಗೀಡಾಗಿರುವ ಕೃಷಿಗೆ ಆನುಪಾತಿಕ ನಷ್ಟಪರಿಹಾರ ನೀಡುವ ಬಗ್ಗೆ ಅರಣ್ಯ ಇಲಾಖೆ ಮತ್ತು ಕೃಷಿಕ ಕಲ್ಯಾಣ-ಕೃಷಿ ಅಭಿವೃದ್ಧಿ ಸಮಿತಿ ಅಗತ್ಯಕ್ರಮ ಕೈಗೊಳ್ಳಬೇಖು. ಜತೆಗೆ ಕೃಷಿಯನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಬಂದೂಕು ಪರವಾನಗಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾನೂನಿನಡಿ ಪರವಾನಗಿ ಮಂಜೂರುಗೊಳಿಸುವಂತೆಯೂ ನಿರ್ದೇಶಿಸಲಾಯಿತು.
ಜಿಲ್ಲಾಧಿಕಾರಿ ಭಂಡಾರಿ ಸವಾಗತ್ ರಣ್‍ವೀರ್‍ಚಂದ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎನ್.ಎ ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್, ಸಇ.ಎಚ್. ಕುಞಂಬು. ಇಚಂದ್ರಶೇಖರನ್, ಎಂ. ರಾಜಗೋಪಾಲನ್, ಜಿಪಂ ಅಧ್ಯಕ್ಷೆ ಬೇಬಿಬಾಲಕೃಷ್ಣನ್, ಜನಪ್ರತಿನಿಧಿಗಖು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.