ಮುಂಬೈ: ಕೋವಿಡ್ ಲಸಿಕೆಯ ಎರಡು ಡೋಸ್ ಗಳನ್ನು ಪಡೆದವರಿಗೆ ಮಾತ್ರ ಮುಂಬೈ ಹಾಗೂ ಮಹಾರಾಷ್ಟ್ರದ ಇತರ ನಗರಗಳಲ್ಲಿನ ಮಾಲ್‌ಗಳಿಗೆ ಪ್ರವೇಶಿಸಲು ಅನುಮತಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.
ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ, ಆಗಸ್ಟ್ 15 ರಿಂದ ಸರಕಾರವು ಕೋವಿಡ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಿದೆ ಎಂದು ಹೇಳಿದರು.
"ಡಬಲ್ ಡೋಸ್ ಪಡೆದಿರುವ ಜನರು ಸ್ಥಳೀಯ ರೈಲುಗಳನ್ನು ಹತ್ತಬಹುದು. ರಾಜ್ಯ ಸರಕಾರವು ಜನರಿಗೆ ಮಾಸಿಕ ಹಾಗೂ ತ್ರೈಮಾಸಿಕ ಪಾಸ್‌ಗಳನ್ನು ನೀಡಲು ಸೂಚನೆಗಳನ್ನು ನೀಡಿದೆ" ಎಂದು ಅವರು ಹೇಳಿದರು.
ರಾತ್ರಿ 10 ರವರೆಗೆ ರೆಸ್ಟೋರೆಂಟ್‌ಗಳನ್ನು ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು ಎಂದು ಸಚಿವರು ಹೇಳಿದರು. ಅಂಗಡಿಗಳು ಸಹ ರಾತ್ರಿ 10 ರವರೆಗೆ ತೆರೆದಿರುತ್ತವೆ ಎಂದು ಅವರು ಹೇಳಿದರು.