ನವದೆಹಲಿ: 'ಕೋವಿಡ್ -19' ಲಸಿಕೆ ಕೋವ್ಯಾಕ್ಸಿನ್ ಉತ್ಪಾದಿಸಲು ಗುಜರಾತ್‌ನ ಅಂಕಲೇಶ್ವರದಲ್ಲಿರುವ ಭಾರತ್ ಬಯೋಟೆಕ್‌ನ ಉತ್ಪಾದನಾ ಘಟಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ' ಎಂದು ಕೇಂದ್ರ ಸಚಿವ ಮನ್‌ಸುಖ್ ಮಾಂಡವೀಯಾ ಮಂಗಳವಾರ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯಾ, 'ಸರ್ಕಾರದ ಈ ಕ್ರಮದಿಂದಾಗಿ ದೇಶದಲ್ಲಿ ಕೋವಿಡ್ ಲಸಿಕೆ ಲಭ್ಯತೆಯ ಪ್ರಮಾಣ ಹೆಚ್ಚಾಗಲಿದೆ' ಎಂದು ಹೇಳಿದ್ದಾರೆ.
ಈ ವರ್ಷದ ಮೇ ತಿಂಗಳಲ್ಲಿ ಭಾರತ್ ಬಯೋಟೆಕ್ ಕಂಪನಿ ತನ್ನ ಅಂಕಲೇಶ್ವರ ಘಟಕದಿಂದ ಹೆಚ್ಚುವರಿಯಾಗಿ 20 ಕೋಟಿ ಡೋಸ್‌ಗಳಷ್ಟು ಕೋವ್ಯಾಕ್ಸಿನ್ ಲಸಿಕೆ ಉತ್ಪಾದಿಸುವುದಾಗಿ ಪ್ರಕಟಿಸಿತ್ತು.
'ಮುಂದಿನ ದಿನಗಳಲ್ಲಿ ತನ್ನ ಒಡೆತನದ ಚಿರೋನ್ ಬೆಹರಿಂಗ್‌ನಲ್ಲಿರುವ ಮತ್ತೊಂದು ಉತ್ಪಾದನಾ ಘಟಕವನ್ನು 20 ಕೋಟಿ ಡೋಸ್ ಕೋವ್ಯಾಕ್ಸಿನ್ ಉತ್ಪಾದಿಸಲು ಬಳಸಿಕೊಳ್ಳುವುದಾಗಿ ತಿಳಿಸಿದೆ.