ಕಾಸರಗೋಡು: ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಪಥಸಂಚಲನ ವಿದ್ಯಾನಗರದ ನಗರಸಭೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕೋವಿಡ್ ಕಟ್ಟುನಿಟ್ಟುಗಳನ್ನು ಕಡ್ಡಾಯವಾಗಿ ಪಾಲಿಸಿ ಪಥಸಂಚಲನ ನಡೆಸಲು ಆನ್ ಲೈನ್ ಮೂಲಕ ನಡೆದ ಸಿದ್ಧತಾ ಸಭೆ ತೀರ್ಮಾನಿಸಿದೆ.
ಪೋಲೀಸ್ ಪಡೆಯ ಮೂರು ತಂಡ, ಅಬಕಾರಿ ದಳದ ಒಂದು ತಂಡ ಪಥಸಂಚಲನ ನಡೆಸಲಿದೆ. ಬಂದರು, ವಸ್ತು ಸಂಗ್ರಹಾಲಯ ಸಚಿವ ಅಹಮ್ಮದ್ ದೇವರ್ ಕೋವಿಲ್ ಪಥಸಂಚಲನದ ವಂದನೆ ಸ್ವೀಕರಿಸುವರು. ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ದಂಡನಾಧಿಕಾರಿ ಎ.ಕೆ.ರಮೇಂದ್ರನ್, ಅಡಿಷನಲ್ ಎಸ್.ಪಿ. ಹರಿಶ್ಚಂದ್ರ ನಾಯ್ಕ್, ವಿವಿಧ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.