ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಗಡಿನಾಡು ಚುಟುಕು ಸಾಹಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಅವರಿಗೆ ವಚನ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಇತ್ತೀಚೆಗೆ ಚುಟುಕು ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಡಾ.ದೊಡ್ಡರಂಗೇಗೌಡ, ವಚನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ವಿ.ತ್ಯಾಗರಾಜ, ಬೆಂಗಳೂರು ನಗರ ಕಸಾಪ ಅಧ್ಯಕ್ಷ ಮಾಯಣ್ಣ ಮತ್ತಿತ್ತರರು ಉಪಸ್ಥಿತರಿದ್ದರು.