ನವದೆಹಲಿ: ಗಾಯಕ ಬಾಬುಲ್ ಸುಪ್ರಿಯೋ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸುವಲ್ಲಿ ಭಾರತೀಯ ಜನತಾ ಪಾರ್ಟಿ ಸೋಮವಾರ ಯಶಸ್ವಿಯಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬುಲ್ ಸುಪ್ರಿಯೋ, ಸಂಸದನಾಗಿ ಸಾಂವಿಧಾನಿಕ ಜವಾಬ್ದಾರಿಗಳನ್ನು ಮುಂದುವರೆಸುತ್ತೇನೆ ಆದರೆ, ರಾಜಕೀಯದಿಂದ ಹಿಂದೆ ಸರಿಯುತ್ತೀನಿ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಮಂತ್ರಿ ಮಂಡಳಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದ ಎರಡು ಅವಧಿ ಸಂಸದರು ಆಗಿರುವ ಬಾಬುಲು ಸುಪ್ರಿಯೋ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆ. ಪಿ. ನಡ್ಡಾ ತಮ್ಮೊಂದಿಗೆ ಮಾತನಾಡಿದ್ದು, ಅವರ ಸಲಹೆಗಳ ಬಗ್ಗೆ ಚಿಂತಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.