ಪೆರ್ಲ: ಕೇರಳ ಸರ್ಕಾರದ 'ಆದ್ರ್ರ'ಯೋಜನೆಯನ್ವಯ ಕುಟುಂಬ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾದ ಎಣ್ಮಕಜೆ ಗ್ರಾಮ ಪಂಚಾಯಿತಿಯ ಪೆರ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ ಗುರುವಾರ ನಡೆಯಿತು.
ಕೋವಿಡ್ ನಿಬಂಧನೆಯೊಂದಿಗೆ ನಡೆದ ಸಮಾರಂಭದಲ್ಲಿ ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಎಸ್. ಸೋಮಶೇಖರ್ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ವೈದ್ಯಾಧಿಕಾರಿ, ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಎಂಡೋಸಲ್ಫಾನ್ ನಿಧಿ ಬಳಸಿ ಮೂರುವರೆ ಕೋಟಿ ರೂ. ವೆಚ್ಗಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ.