ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.
ಆ.15 ರಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕ್ರೀಡಾಪಟುಗಳನ್ನು ಭೇಟಿ ಮಾಡಿ ಮಾತನಾಡಲಿದ್ದಾರೆ. ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟ್ ಗಳ ಮೂಲಕ ನಿರಂತರ ಪ್ರೋತ್ಸಾಹ ನೀಡುತ್ತಿದ್ದಾರೆ.
ಆ.03 ರಂದು ಭಾರತ ಪುರುಷರ ಹಾಕಿ ತಂಡ ಬೆಲ್ಜಿಯಂ ವಿರುದ್ಧ ಒಲಂಪಿಕ್ಸ್ ನಲ್ಲಿ ಸೋಲು ಕಂಡಿತ್ತು. ಈ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಸೋಲು-ಗೆಲುವು ಜೀವನದ ಭಾಗ ಹಾಗೂ ಭಾರತ ತನ್ನ ಆಟಗಾರರ ಬಗ್ಗೆ ಹೆಮ್ಮೆ ಪಡುತ್ತದೆ ಎಂದು ಟ್ವೀಟ್ ಮಾಡಿದ್ದರು.