ಪೆರ್ಲ: ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪೆರ್ಲ ನಾಲಂದ ಕಾಲೇಜಿನ ಪ್ರಾಚಾರ್ಯರಾಗಿ ಡಾ. ಕಿಶೋರ್ ಕುಮಾರ್ ರೈ ಶೇಣಿ ಅಧಿಕಾರ ವಹಿಸಿಕೊಂಡಿದ್ದಾರೆ. ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಎಂ.ಫಿಲ್ ಹಾಗೂ ಮಂಗಳೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ಶ್ರೀ ಉಳ್ಳಾಲ್ತೀ ಆರಾಧನೆ ಇತಿಹಾಸ, ಪುರಾಣ ಪ್ರದರ್ಶನ ಎಂಬ ವಿಷಯದ ಬಗ್ಗೆ ಮಂಡಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿತ್ತು. ಕಳೆದ ಹಲವು ವರ್ಷಗಳಿಂದ ಮಂಗಳೂರಿನ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ಡೀನ್, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು. ಇವರು ಶೇಣಿ ಸದಾನಂದ ರೈ-ಲೀಲಾವತಿ ದಂಪತಿ ಪುತ್ರ.