ಮಂಜೇಶ್ವರ: ಬಂಗ್ರಮಂಜೇಶ್ವರ ಸರ್ಕಾರಿ ಫ್ರೌಢಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಶ್ರಫ್ ಬಿ.ಎಂ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಶಿಕ್ಷಕಿ ಸುನಿತಾ ಧ್ವಜಾರೋಹಣ ನಿರ್ವಹಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷೆ ಸಂಸ|ಈನ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಾತೃಮಂಡಳಿಯ ಅಸ್ಮ, ನಜ್ಮುನ್ನೀಸ, ಶಶಿಕಲಾ ಟೀಚರ್, ಶಿಕ್ಷಕಿ ಗಾಯತ್ರಿ ಹಾಗೂ ರಕ್ಷಕರು, ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಿಲ್ವಿಯಾ ಟೀಚರ್ ಸ್ವಾಗತಿಸಿ, ನಿರೂಪಿಸಿದರು. ಗಾಯತ್ರಿ ಟೀಚರ್ ವಂದಿಸಿದರು.