ಉಪ್ಪಳ: ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಕೋವಿಡ್ ಮಾನದಂಡಗಳನ್ನು ಅನುಸರಿಸಿ ನಡೆದ ಓಣಂ ಹಬ್ಬದ ಕಾರ್ಯಕ್ರಮವನ್ನು ಪ್ರಶಾಂತಿ ಸೇವಾ ಟ್ರಸ್ಟಿನ ಉಪಾಧ್ಯಕ್ಷರಾದ ಪೆಲತ್ತಡ್ಕ ಶ್ರೀ ರಾಮಕೃಷ್ಣ ಭಟ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಓಣಂ ಆಚರಣೆಯ ಮಹತ್ವ ಮತ್ತು ಹಿನ್ನಲೆಯನ್ನು ವಿವರಿಸಿದರು. ಕಾಸರಗೋಡಿನ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಜಿಲ್ಲಾಧ್ಯಕ್ಷ, ಪ್ರಶಾಂತಿ ಸೇವಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಹೆಚ್.ಮಹಾಲಿಂಗ ಭಟ್, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರಗಿತು. ಪ್ರಾಂಶುಪಾಲ ಅನೂಪ್. ಕೆಸ್ವಾಗತಿಸಿದರು. ಶಿಕ್ಷಕ ವಿನೋದ್ ಕಡಂಬಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜ್ಯೋತಿಲಕ್ಷ್ಮಿ ವಂದಿಸಿದರು. ಆನ್‍ಲೈನ್ ಮಾದ್ಯಮದ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ಓಣಂ ಔತಣಕೂಟ ಏರ್ಪಡಿಸಲಾಯಿತು.